ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್ ರಾಜೀನಾಮೆ
ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ (DMK) ಅಧ್ಯಕ್ಷ ಎಂ.ಕೆ ಸ್ಟಾಲಿನ್ (MK Stalin) ಅವರಿಂದು ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಔಪಚಾರಿಕವಾಗಿ ಕಳುಹಿಸಿದ್ದಾರೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸುವಲ್ಲಿ ಡಿಎಂಕೆ ವಿಫಲವಾದ ಹಿನ್ನೆಲೆ ಸ್ಟಾಲಿನ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.





