ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಮೃತ್ಯು
ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಸಾವಿಗೀಡಾಗಿದ್ದಾರೆ.
ಬೆಸ್ಕಾಂ ವಿಜಿಲೆನ್ಸ್ ನಲ್ಲಿ ಎಸ್ಪಿಯಾಗಿದ್ದ ಲಾವಣ್ಯ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಶನಿವಾರ) ಮಧ್ಯಾಹ್ನ 2:30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಮೃತರು 10 ವರ್ಷದ ಗಂಡು ಮಗು ಹಾಗೂ 3 ವರ್ಷದ ಹೆಣ್ಣುವನ್ನ ಅಗಲಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ 2023 ರಿಂದಲೂ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.





