ಬಿಜೆಪಿ ಮುಖಂಡ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ನ ಗುಂಡಿಕ್ಕಿ ಹತ್ಯೆ
ಕೋಲ್ಕತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ ಪ್ರದೇಶದಲ್ಲಿ ಬಿಜೆಪಿ ಮುಖಂಡ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು Times Now ವರದಿ ಮಾಡಿದೆ.
ಮಧ್ಯಮಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಬುಧವಾರ ಸುವೇಂದು ಅಧಿಕಾರಿ ಅವರ ಸಹಾಯಕನನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಚಂದ್ರನಾಥ್ ರಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ತಿಳಿದು ಬಂದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಹೆಚ್ಚಿನ ಸಂಖ್ಯೆಯಲ್ಲಿಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪ್ರದೇಶವನ್ನು ಸುತ್ತುವರಿದಿದ್ದಾರೆ. ಚಂದ್ರನಾಥ್ ರಥ್ ಅವರ ಮೃತದೇಹವನ್ನು ಮಧ್ಯಮಗ್ರಾಮದ ಮೆಗಾ ಸಿಟಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ.





