May 7, 2026

ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ: ಟಿವಿಕೆಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಟೀಕೆ

0
image_editor_output_image50537379-1778147243725.jpg

ತಮಿಳು ನಾಡು ರಾಜಕೀಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಮಧ್ಯೆ ದ್ರಾವಿಡ ಮುನ್ನೇತ್ರ ಕಳಗಂ (DMK) ಕಾಂಗ್ರೆಸ್ ನ್ನು ಬೆನ್ನಿಗೆ ಚೂರಿಗೆ ಹಾಕಿದ ಪಕ್ಷ ಎಂದು ಆರೋಪಿಸಿದೆ.

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಡಿಎಂಕೆ ವಕ್ತಾರ ಸರವಣನ್ ಅಣ್ಣಾದುರೈ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಈ ನಿರ್ಧಾರಕ್ಕೆ ಕಾಂಗ್ರೆಸ್ ಹಿಂದಿನಿಂದ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನ ಈ ನಿರ್ಧಾರ ತಕ್ಷಣದ ಒಳಿತಿಗೆ ಮಾತ್ರವಾದದ್ದು. 2029ರ ಲೋಕಸಭೆ ಮಹತ್ವದ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಮಾಡಲು ನಾವು ಆತ್ಮವಿಶ್ವಾಸದಲ್ಲಿದ್ದೆವು. ಆದರೆ ಕಾಂಗ್ರೆಸ್‌ನ ಈ ಕ್ರಮದಿಂದ ಅದು ಸ್ಥಿರವಲ್ಲದ ಮೈತ್ರಿ ಪಾಲುದಾರವಾಗಿ ಪರಿಣಮಿಸಿದೆ. ದೇಶದಾದ್ಯಂತ ಕಾಂಗ್ರೆಸ್‌ ಮೇಲೆ ಜನರು ವಿಶ್ವಾಸ ಇರಲಾರದು ಎಂಬ ಭಾವನೆ ಮೂಡುತ್ತಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!