September 26, 2026

ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ 9.68 ಲಕ್ಷ ರೂ. ಮೌಲ್ಯದ ಚಿನ್ನ ಕಳವು: ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಅರೆಸ್ಟ್

0
image_editor_output_image-561795904-1778235291283.jpg

ಬೆಂಗಳೂರು: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಖಾಸಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೆಣ್ಣೂರು ಬಾಗಲೂರು ಮುಖ್ಯರಸ್ತೆಯಲ್ಲಿರುವ ಆಸ್ಪತ್ರೆಯ 36 ವರ್ಷದ ಮಹಿಳಾ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮೇ 1ರಂದು ಆಸ್ಪತ್ರೆಗೆ ದಾಖಲಾಗಿದ್ದ ಸ್ವಪ್ನಾ ಎಂಬ ರೋಗಿಯ 9.68 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಈ ಸಂಬಂಧ ಸ್ವಪ್ನಾ ಪತಿ ಶ್ರೀನಿವಾಸ್ ಎಂಬುವರು ನೀಡಿದ ದೂರಿನ ಮೇರೆಗೆ ವಶಕ್ಕೆ ಪಡೆಯಲಾಗಿದೆ.

 

ಯಲಹಂಕ ನಿವಾಸಿ ಶ್ರೀನಿವಾಸ್, ಮೇ 1ರಂದು ಶಸ್ತ್ರಚಿಕಿತ್ಸೆಗಾಗಿ ತಮ್ಮ ಪತ್ನಿ ಸ್ವಪ್ನಾರನ್ನು ಹೆಣ್ಣೂರು ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೇ 2ರ ಮುಂಜಾನೆ ಆಪರೇಷನ್‌ ಥಿಯೇಟರ್‌ಗೆ ಕರೆದೊಯ್ಯುವ ಮೊದಲು ನರ್ಸಿಂಗ್ ಸಿಬ್ಬಂದಿ ಎಲ್ಲಾ ಆಭರಣಗಳನ್ನು ತೆಗೆಯುವಂತೆ ಸೂಚಿಸಿದ್ದರು. ಬಳಿಕ ಮಹಿಳೆ 65 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, 9 ಗ್ರಾಂ ತೂಕದ ಕಿವಿಯೋಲೆಗಳು ಹಾಗೂ 10 ಗ್ರಾಂ ತೂಕದ ಬೆಳ್ಳಿ ಕಾಲುಗಜ್ಜೆಗಳನ್ನು ಹ್ಯಾಂಡ್‌ಬ್ಯಾಗ್‌ನಲ್ಲಿ ಇಟ್ಟು ವಾರ್ಡ್‌ ಕಪಾಟಿನೊಳಗೆ ಇರಿಸಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಮಧ್ಯಾಹ್ನ ಸುಮಾರು 2.45ಕ್ಕೆ ಕಪಾಟು ಪರಿಶೀಲಿಸಿದಾಗ ಆಭರಣಗಳು ಕಾಣೆ ಆಗಿತ್ತು. ಈ ಸಂಬಂಧ ಆಸ್ಪತ್ರೆಯ ಸಿಬ್ಬಂದಿ ವಿಚಾರಿಸಿದಾಗ ಸರಿಯಾದ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಶ್ರೀನಿವಾಸ್ ಪೊಲೀಸರಿಗೆ ದೂರು ನೀಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!