May 8, 2026

ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತ್ಯು

0
71B2E2B8-BCF8-4CB3-AF1B-B64F2065BFD6-750x375.jpeg

ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತ (21) ಎಂದು ಗುರುತಿಸಲಾಗಿದೆ.

ರಜೆ ದಿನದ ಮಜಾ ಕಳೆಯಲು ಸ್ನೇಹಿತರ ತಂಡದೊಂದಿಗೆ ನದಿಗೆ ಆಗಮಿಸಿದ್ದ ಐವರು ವಿದ್ಯಾರ್ಥಿನಿಯರು ಸ್ನಾನಕ್ಕಾಗಿ ನೀರಿಗೆ ಇಳಿದಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ ತಿಳಿಯದೆ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗದೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನೋವಿನ ವಾತಾವರಣ ನಿರ್ಮಾಣವಾಗಿದೆ.

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!