May 13, 2026

ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

0
image_editor_output_image-471477596-1778317416853.jpg

ರಾಯಚೂರು: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಘಟನೆ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅರಗಿನಮರ ಕ್ಯಾಂಪ್‌ನ ವಿದ್ಯಾರ್ಥಿನಿ ಭೂಮಿಕಾ (17) ಮೃತ ದುರ್ದೈವಿ. ಮೇಘನಾ, ಮಹೇಶ್ವರಿ, ಜಹೀದಾ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯರು.

ಕಾಲೇಜು ಮುಗಿದು ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದರು, ಈ ವೇಳೆ ರಿವರ್ಸ್ ತೆಗೆದುಕೊಳ್ಳುವಾಗ ಚಾಲಕನ ಅಜಾಗೂರಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ. ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೂ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!