May 13, 2026

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

0
image_editor_output_image766913556-1778317688334.jpg

ಕೋಲ್ಕತ್ತಾ: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಹಾಗೂ ಎನ್‌ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.

Leave a Reply

Your email address will not be published. Required fields are marked *

error: Content is protected !!