May 10, 2026

ಮಂಗಳೂರು: 13.06 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿಯನ್ನು ಬಂಧಿಸಿದ ರೈಲ್ವೇ ರಕ್ಷಣಾ ಪಡೆ

0
image_editor_output_image-1818883776-1778332796616.jpg

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನ ವಿಚಾರಣೆ ನಡೆಸಿದ ರೈಲ್ವೆ ಪೊಲೀಸರಿಗೆ ಶಾಕ್ ಆಗಿದ್ದು, ವಿಚಾರಣೆ ವೇಳೆ ಯುವಕ ಕುಖ್ಯಾತ ದರೋಡೆಕೋರನಾಗಿದ್ದು, ಇದೀಗ ಆತನನ್ನು ರೈಲ್ವೇ ರಕ್ಷಣಾ ಪಡೆ (RPF) ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು ₹13.06 ಲಕ್ಷ ಮೌಲ್ಯದಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾಸರಗೋಡು ಮೂಲದ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಈತನ ಬ್ಯಾಗ್ ತಪಾಸಣೆ ನಡೆಸಿದಾಗ, ಯಾವುದೇ ದಾಖಲೆಗಳಿಲ್ಲದ 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್‌ಲೆಟ್ ಹಾಗೂ ಸ್ಟಡ್‌ಗಳು ಸೇರಿವೆ.

Leave a Reply

Your email address will not be published. Required fields are marked *

error: Content is protected !!