May 10, 2026

ಉಪ್ಪಿನಂಗಡಿ: ರೋಡ್ ರೋಲರ್ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು

0
image_editor_output_image561352901-1778332873090.jpg

ಉಪ್ಪಿನಂಗಡಿ: ಗಾಂಧಿ ಪಾರ್ಕ್ ಬಳಿ ಶನಿವಾರ ನಡೆಯುತ್ತಿದ್ದ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಕಾರ್ಮಿಕ ಎಂದು ಗುರುತಿಸಲಾಗಿದೆ.

ಗಾಂಧಿ ಪಾರ್ಕ್ ಬಳಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವ್ಯಕ್ತಿ ರಸ್ತೆ ಬದಿಯಲ್ಲಿ ಮಲಗಿದ್ದರೆನ್ನಲಾಗಿದೆ. ಚಾಲಕನ ಗಮನಕ್ಕೆ ಬಾರದೆ ರೋಡ್ ರೋಲರ್ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ, ದೇಹವು ಸಂಪೂರ್ಣ ಅಪ್ಪಚ್ಚಿಯಾಗಿ ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ.

ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಭಾರಿ ಯಂತ್ರೋಪಕರಣಗಳ ಓಡಾಟವಿದ್ದು, ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಪೂರ್ಣ ವಿವರ ಹಾಗೂ ಘಟನೆಗೆ ನಿಖರ ಕಾರಣಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!