May 11, 2026

ಬೆಳ್ತಂಗಡಿ: ಆಸ್ಪತ್ರೆಯ ಆವರಣದಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು

0
image_editor_output_image-1454767866-1778491108366.jpg

ಬೆಳ್ತಂಗಡಿ: ಹೊಟ್ಟೆನೋವಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಆಸ್ಪತ್ರೆಯ ಆವರಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಯುತ (42) ಮೃತಪಟ್ಟವರು. ತೀವ್ರ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಇವರು ಮೇ 10ರಂದು ಮಧ್ಯಾಹ್ನ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 11ರಂದು ಮುಂಜಾನೆ ಸುಮಾರು 5 ಗಂಟೆಯ ಹೊತ್ತಿಗೆ ಅಚ್ಯುತ ಅವರು ಆಸ್ಪತ್ರೆಯ ವಾರ್ಡ್‌ನಿಂದ ಯಾರಿಗೂ ತಿಳಿಸದೆ ಹೊರಬಂದಿದ್ದರು. ಆಸ್ಪತ್ರೆಯ ಹಿಂಭಾಗದ ಡಯಾಲಿಸಿಸ್ ಕೇಂದ್ರದ ಬಳಿ ಹೋಗುತ್ತಿದ್ದಾಗ ಅವರು ಹಠಾತ್ತಾಗಿ ಕುಸಿದು ಬಿದ್ದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಅಚ್ಯುತ ಅವರು ಅತ್ಯಂತ ಬಡತನದ ಹಿನ್ನೆಲೆಯವರಾಗಿದ್ದು, ಇಬ್ಬರು ಪುಟ್ಟ ಮಕ್ಕಳನ್ನು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಪತ್ನಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆಯ ಆಧಾರಸ್ತಂಭವಾಗಿದ್ದರು. ಆಸ್ಪತ್ರೆಯಲ್ಲಿನ ನಿರ್ಲಕ್ಷ್ಯದಿಂದ ಆತ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ

Leave a Reply

Your email address will not be published. Required fields are marked *

error: Content is protected !!