May 12, 2026

ತನ್ನ ಜನ್ಮದಿನದಂದೇ ಯುವತಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image1935039880-1778571289377.jpg

ಬೆಳಗಾವಿ: ಕೇವಲ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್‌ಟೇಬಲ್‌ ಒಬ್ಬರ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ನೇಣಿಗೆ ಶರಣಾದ ದಾರುಣ ಘಟನೆ ಬೆಳಗಾವಿಯ ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ (21) ಎಂದು ಗುರುತಿಸಲಾಗಿದೆ. ಈಕೆ ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಉಳಿದುಕೊಂಡು ವ್ಯಾಸಾಂಗ ಮಾಡುತ್ತಿದ್ದಳು. ಕಾವೇರಿ ಅವರಿಗೆ ಇತ್ತೀಚೆಗಷ್ಟೇ ಕುಟುಂಬಸ್ಥರು ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಜೊತೆ ಮದುವೆ ನಿಶ್ಚಯಿಸಿದ್ದರು. ಇಬ್ಬರ ನಡುವೆ ನಿಶ್ಚಿತಾರ್ಥ ಕೂಡ ನೆರವೇರಿತ್ತು. ಈ ಯುವತಿ ಅಂತಿಮ ವರ್ಷದ ಬಿಎಸ್‌ಸಿ ಓದುತ್ತಿದ್ದಳು. ದಿಢೀರ್ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!