ಚಿಕ್ಕಮಗಳೂರು: 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವು ಮಾರಾಟ: ಐವರನ್ನು ಬಂಧಿಸಿದ ಸಿಐಡಿ ಪೊಲೀಸರು
ಚಿಕ್ಕಮಗಳೂರು: ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ನಗರದ ವಾಜಪೇಯಿ ಲೇ ಔಟ್ ಬಡಾವಣೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.





