ನೆಲಮಂಗಲ: ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ ಮಾಡಿಕೊಂಡು ತೀರಿಸೋಕೆ ಆಗದೇ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ಮೂಲತಃ ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಮೃತ ಯುವಕ. ಕಳೆದ ಆರು ವರ್ಷದಿಂದ ನೆಲಮಂಗಲಕ್ಕೆ ಬಂದು ಕಾರ್ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ.
