ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು 6 ಮಂದಿ ಸಾವು
ಪುಣೆ: ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೋಠೆವಾಡಿ ಗ್ರಾಮದಲ್ಲಿ ನಡೆದಿದೆ.
ಮೋಠೆವಾಡಿ ಮಹಾರಾಷ್ಟ್ರ- ಕರ್ನಾಟಕ ಗಡಿಯ ಹಳ್ಳಿಯಾಗಿದ್ದು, ಗ್ರಾಮದ ಮುರಗಾಬಾಯಿ ದೇವಸ್ಥಾನದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ 15 ಜನರಿಗೆ ಗಂಭೀರ ಗಾಯಗಳಾಗಿದೆ. ಗೋಡೆಯ ಕೆಳಗೆ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರೀ ಗಾಳಿ ಮಳೆಗೆ ಗೋಡೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.





