ಉಳ್ಳಾಲ: ಸ್ಪೀಕರ್ ಯು.ಟಿ. ಖಾದರ್‌ಗೆ ಘೆರಾವ್: 11 ಜನರ ವಿರುದ್ಧ FIR ದಾಖಲು
ಮಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್‌ಗೆ ಘೆರಾವ್ ವಿಚಾರ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಖಾದರ್ ಅಂಗರಕ್ಷಕ ಮೊಹಮ್ಮದ್ ಯಾಸಿನ್ ದೂರು ಆಧರಿಸಿ ಫೇರಾವ್ ಹಾಕಿದ ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಕೆಲವು ದಿನಗಳ ಹಿಂದೆ ಯು.ಟಿ. ಖಾದರ್ ಅವರು ಉಳ್ಳಾಲ ತಾಲೂಕಿಗೆ ತೆರಳಿದ್ದರು. ಈ ವೇಳೆ ಕುತ್ತಾರ್ ನಲ್ಲಿ ವೃತ್ತ ನಿರ್ಮಾಣ ವಿಚಾರ ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಅಸಮಾಧಾನಗೊಂಡಿದ್ದ ಜನರ ತಂಡ ಅವರ ವಾಹನವನ್ನು ತಡೆದು ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ಎಂದು ತಿಳಿದು ಬಂದಿದೆ.
ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಿಂದ ಕುತ್ತಾರಿನಲ್ಲಿ ಸರ್ಕಲ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದರ ನಿರ್ವಹಣೆಯ ಜವಾಬ್ದಾರಿಯನ್ನೂ ಸರ್ಕಾರ ಮೆಡಿಕಲ್ ಕಾಲೇಜಿಗೇ ವಹಿಸಿದೆ. ಆದರೆ ಸರ್ಕಲ್ ನಿರ್ಮಾಣದ ಬಗ್ಗೆ ಖಾದರ್ ವಿರುದ್ದ ಕೆಲವರು ತಿರುಗಿ ಬಿದ್ದಿದ್ದಾರೆ.





