ಹಿಂದೂ ಧರ್ಮದ ನಂಬಿಕೆ ಸಾಬೀತುಪಡಿಸಲು ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್
ನವದೆಹಲಿ:”ಹಿಂದೂ ಧರ್ಮವು ಒಂದು ಜೀವನ ವಿಧಾನ, ಹಿಂದೂವಾಗಿ ಉಳಿಯಲು ದೇವಸ್ಥಾನಕ್ಕೆ ಹೋಗುವುದು ಅಥವಾ ಯಾವುದೇ ಆಚರಣೆಯನ್ನು ಮಾಡುವುದು ಕಡ್ಡಾಯವಲ್ಲ. ಮನೆಯೊಳಗೆ ದೀಪ ಹಚ್ಚುವುದು ಕೂಡ ಅವರ ನಂಬಿಕೆಯನ್ನು ಸಾಬೀತುಪಡಿಸಲು ಸಾಕು” ಎಂದು ಬುಧವಾರ (ಮೇ 13) ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ 9 ಮಂದಿ ನ್ಯಾಯಾಧೀಶರ ಸಂವಿಧಾನಿಕ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
ಕೇರಳದ ಶಬರಿಮಲೆ ದೇವಸ್ಥಾನ ಸೇರಿದಂತೆ, ಮತ್ತು ದಾವೂದಿ ಬೊಹ್ರಾಗಳು ಸೇರಿದಂತೆ ಬಹು ಧರ್ಮಗಳು ಆಚರಿಸುವ ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಯ ಆಡಿಯೂ ಈ ಮಹತ್ವದ ಚರ್ಚೆ ನಡೆದಿದೆ.
ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ, ಎಂ.ಎಂ.ಸುಂದರೇಶ್, ಅಕ್ಸಾನುದ್ದೀನ್ ಅಮಾನುಲ್ಲಾ, ಅರವಿಂದ್ ಕುಮಾರ್, ಆಗಸ್ಟಿನ್ ಜಾರ್ಜ್ ಮಸಿಹ್, ಪ್ರಸನ್ನ ಬಿ. ವರಾಳೆ, ಆರ್. ಮಹಾದೇವನ್ ಮತ್ತು ಜಾಯ್ಕಲ್ಯ ಬಾಗ್ನಿ ಕೂಡ 9 ಮಂದಿ ನ್ಯಾಯಾಧೀಶರ ಪೀಠದ ಭಾಗವಾಗಿದ್ದರು.





