May 15, 2026

ವಿಟ್ಲ: ಕೋಟೆತಡ್ಕ ಕೆಂಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪೊಲೀಸರ ದಾಳಿ: ಸರಕಾರಿ ಜಾಗದಲ್ಲಿ ಅಕ್ರಮ ಗಣಿಗಾರಿಕೆ; ಸಾರ್ವಜನಿಕರಿಂದ ಗಂಭೀರ ಆರೋಪ

0
IMG-20260515-WA0000.jpg

ವಿಟ್ಲ: ಆಳಿಕೆ ಗ್ರಾಮದ ಕೋಟೆತಡ್ಕ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಧಾಳಿ ಮಾಡಿ, ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದಿದ್ದಾರೆ.

ದಾಖಲಾತಿಗಳ ನೈಜತೆಯ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಸ್ಪಷ್ಟನೆಯನ್ನು ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ವೇ ನಂಬರ್‍ 377 ಸರ್ಕಾರಿ ಜಾಗವಾಗಿದ್ದು, ಅದರಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಾರೆ ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ದೂರು ಕೊಟ್ಟರು ಸುಮ್ಮನ್ನಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕೆಂಪುಕಲ್ಲು ಗಣಿಗಾರಿಕೆ ಮಾಡಿ ನಿಯಮ ಮೀರಿ ಆಳಕ್ಕೆ ಹೊಂಡ ಮಾಡಿದ್ದು, ಮುಂದಿನ ದಿನಗಳಲ್ಲಿ ಊರಿಗೆ ಬರೀ ಹೊಂಡವೇ ಸಿಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!