May 16, 2026

ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ದಂಧೆ: ಜಿಲ್ಲೆಯಿಂದ ಆರೋಪಿ ಗಡಿಪಾರು ಮಾಡಿ ಆದೇಶ

0
image_editor_output_image-1112519798-1778932401228.jpg

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಪೊಲೀಸ್‌ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ನಿವಾಸಿ ಭರತ್‌ ಜಯರಾಮ್ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ.

ಆರೋಪಿ ಭರತ್‌ ವಿರುದ್ಧ ಈಗಾಗಲೇ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖಾ ಹಂತದಲ್ಲಿವೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 14ರಂದು ಎಸ್‌ಪಿ ಅವರು ಈ ಆದೇಶ ಜಾರಿಗೊಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!