ಕುಂದಾಪುರ: ಜೀಪ್, ಮೀನು ಸಾಗಾಟದ ಲಾರಿ ನಡುವೆ ಅಪಘಾತ: ಇಬ್ಬರು ಮೃತ್ಯು, 8 ಮಂದಿಗೆ ಗಾಯ
ಕುಂದಾಪುರ: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಜೀಪ್ ಹಾಗೂ ಮೀನು ಸಾಗಾಟದ ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಜೀಪ್‌ನಲ್ಲಿದ್ದ ಪ್ರವಾಸಿಗರು ಹಾಗೂ ಚಾಲಕ ಸೇರಿದಂತೆ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ.
ಇವರೆಲ್ಲರಿಗೂ ಕುಂದಾಪುರ ಹಾಗೂ ಮಣಿಪಾಲದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಕೇರಳ ರಾಜ್ಯದ ಒಂದೇ ಕುಟುಂಬದ ಪ್ರವಾಸಿಗರು ಎಂದು ತಿಳಿದುಬಂದಿದೆ.





