May 19, 2026

ಇಂದು ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ ದರ ಏರಿಕೆ

0
image_editor_output_image135007224-1779181344956.jpg

ಬೆಂಗಳೂರು: ವಾಹನ ಸವಾರರಿಗೆ ಮತ್ತು ಜನಸಾಮಾನ್ಯರಿಗೆ ತೈಲ ಕಂಪನಿಗಳು ಸರಣಿ ಬೆಲೆ ಏರಿಕೆಯ ದೊಡ್ಡ ಶಾಕ್ ನೀಡಿವೆ. ಕಳೆದ ಶುಕ್ರವಾರವಷ್ಟೇ (ಮೇ 15) ಪ್ರತಿ ಲೀಟರ್‌ಗೆ ₹3 ಹೆಚ್ಚಳ ಮಾಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು, ಇಂದು ಮುಂಜಾನೆ ಮತ್ತೆ ಪ್ರತಿ ಲೀಟರ್‌ಗೆ 90 ಪೈಸೆಯಷ್ಟು ದರವನ್ನು ಹೆಚ್ಚಿಸಿವೆ.

ಮಧ್ಯಪ್ರಾಚ್ಯದಲ್ಲಿ (ಪಶ್ಚಿಮ ಏಷ್ಯಾ) ಮುಂದುವರಿದಿರುವ ಯುದ್ಧ ಹಾಗೂ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude Oil) ಬೆಲೆ ಏರಿಕೆಯಾಗಿರುವುದು ಮತ್ತು ಆಮದು ವೆಚ್ಚ ಹೆಚ್ಚಿರುವುದು ಈ ದಿಢೀರ್ ದರ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ (Petrol, Diesel) ದರದಲ್ಲಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.

Leave a Reply

Your email address will not be published. Required fields are marked *

error: Content is protected !!