May 19, 2026

ಕಾಸರಗೋಡು: ಬ್ಯಾಂಕ್ ವಾಚ್ ಮ್ಯಾನ್ ಹತ್ಯೆ: ಇಬ್ಬರು ಆರೋಪಿಗಳ ಬಂಧನ

0
image_editor_output_image-182093290-1779181542798.jpg

ಕಾಸರಗೋಡು: ಬದಿಯಡ್ಕ ಸಮೀಪದ ಮಾರ್ಪನಡ್ಕದಲ್ಲಿ ನಡೆದ ಬ್ಯಾಂಕ್ ಕಾವಲುಗಾರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕುಂಬ್ಡಾಜೆಯ ಕಿರಣ್ (30) ಮತ್ತು ಕರುವತ್ತಡ್ಕದ ಅಖಿಲೇಶ್ (25) ಎಂದು ಗುರುತಿಸಲಾಗಿದೆ.

ಮಾರ್ಪನಡ್ಕ ಬೆದ್ರಕೂಡ್ಲುವಿನ ನಿವಾಸಿಯಾಗಿದ್ದ ಸುರೇಶ್ (42) ಅವರು ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಬ್ಯಾಂಕ್ ಆವರಣದಲ್ಲೇ ನಡೆದ ಕ್ರಿಕೆಟ್ ಪಂದ್ಯಾಟದ ವಿಚಾರಕ್ಕೆ ಸಂಬಂಧಿಸಿದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು ಹಲ್ಲೆಗೆ ತಿರುಗಿದೆ ಎನ್ನಲಾಗಿದೆ.

ಘಟನೆಯ ವೇಳೆ ಆರೋಪಿಗಳ ತಂಡ ಸುರೇಶ್ ಅವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದು, ಬಳಿಕ ಅವರು ಮೃತಪಟ್ಟಿದ್ದರು. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬದಿಯಡ್ಕ ಪೊಲೀಸರು ತಕ್ಷಣ ತನಿಖೆ ಆರಂಭಿಸಿ, ಕೃತ್ಯ ನಡೆದ 24 ಗಂಟೆಯೊಳಗೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!