ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಆರ್‌ಸಿಸಿ ಕೋಚಿಂಗ್ ನ ಶಿವರಾಜ್ ಬಂಧನ
ಮುಂಬೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್‌ನನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.
ಸಿಬಿಐ ಭಾನುವಾರ ಶೋಧ ನಡೆಸಿದ ಸಮಯದಲ್ಲಿ ಮೋಟೆಂಗಾಂವ್ಕರ್ ಮೊಬೈಲ್‌ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಪತ್ತೆಯಾಗಿದೆ. ಬಳಿಕ ಶಿವರಾಜ್‌ನನ್ನು ಬಂಧಿಸಲಾಗಿದೆ.





