May 23, 2026

ಚೀನಾ: ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ: 82 ಜನರು ಸಾವು

0
image_editor_output_image-1193984921-1779527247243.jpg

ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ವಿಪತ್ತಾಗಿದೆ.

ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29 ಕ್ಕೆ ಸ್ಫೋಟ ಸಂಭವಿಸಿದೆ. ಆ ಸಮಯದಲ್ಲಿ ಒಟ್ಟು 247 ಕಾರ್ಮಿಕರು ನೆಲದಡಿಯಿದ್ದರು. ಅವರಲ್ಲಿ ಹೆಚ್ಚಿನವರನ್ನು ಶನಿವಾರ ಬೆಳಗ್ಗೆ ಮೇಲ್ಮೈಗೆ ತರಲಾಗಿದೆ.

ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ನಾಪತ್ತೆಯಾದ ಒಂಬತ್ತು ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ತಿಳಿಸಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!