ವರದಕ್ಷಿಣೆ ಕಿರುಕುಳ ಆರೋಪ: ನೇಣು ಬಿಗಿದು ಕಾನ್‌ಸ್ಟೇಬಲ್ ಪತ್ನಿ ಆತ್ಮಹತ್ಯೆ
ಬೆಂಗಳೂರು: ಪೊಲೀಸ್ ಕ್ವಾರ್ಟಸ್‌ನಲ್ಲೇ ನೇಣುಬಿಗಿದುಕೊಂಡು ಕಾನ್‌ಸ್ಪೇಬಲ್ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.
ಲಕ್ಷ್ಮೀ ಪ್ರಿಯಾ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ ದೂರಿನ ಮೇರೆಗೆ ಹೆಚ್‌ಎಎಲ್ ಠಾಣೆಯ ಕಾನ್‌ಸ್ಟೇಬಲ್ ರಾಜೇಶ್ ಹಾಗೂ ತಂದೆ-ತಾಯಿ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.





