May 25, 2026

ಮಾಣಿ ಸಮೀಪ ಲಾರಿ ಮತ್ತು ಡಿಯೋ ಸ್ಕೂಟರ್ ನಡುವೆ ಅಪಘಾತ: ಸವಾರ ಮೃತ್ಯು

0
image_editor_output_image-2067100282-1779707950416

ವಿಟ್ಲ: ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಿಯೋ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಡಿಯೋ ಸ್ಕೂಟರ್‌ (ಕೆಎ-21 ಇಡಿ 8227) ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಕಲಂದರ್ ಶಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಅವರು ಮೂಲತಃ ಸುಳ್ಯ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನ ಕಲ್ಲರ್ಪೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!