May 26, 2026

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ತಾಯಿ-ಮಗ ಸಾವು

0
image_editor_output_image743793177-1779775750698.jpg

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ ತಾಯಿ-ಮಗ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಕುದುರುವಳ್ಳಿ ಗ್ರಾಮದ ಪ್ರಿಯಾಂಕ (28) ಹಾಗೂ ವಿನಿತ್ (7) ಎಂದು ಗುರುತಿಸಲಾಗಿದೆ. ಮಗನನ್ನು ಹಾಸನದ ಶಾಲೆಗೆ ಸೇರಿಸಲು ವರ್ಗಾವಣೆ ಪತ್ರ ತೆಗೆದುಕೊಂಡು ಹೋಗಲು ಇಬ್ಬರು ಬಂದಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಕೇಸ್‌ಗೆ ಟ್ವಿಸ್ಟ್ – ಅಕ್ರಮ ಸಂಬಂಧ ಬೆಳೆಸಿದ್ದ ಪ್ರಿಯಕರನಿಂದಲೇ ಹತ್ಯೆ

ಆಟೋ ಚಾಲಕ ಅಬ್ಬಾಸ್ (52), ಬಾಲಕ ಸಾಗರ್ (13) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!