May 26, 2026

ಮರಕ್ಕೆ ಢಿಕ್ಕಿ ಹೊಡೆದ ಬೈಕ್: ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

0
image_editor_output_image739175572-1779776872412.jpg

ಕೊಪ್ಪಳ : ಮಳೆಯಿಂದ ರಸ್ತೆಗೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭಾನುವಾರ ಬೆಳಗ್ಗೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಭೀಮನೂರ ಬಳಿ ನಡೆದಿದೆ.

ಕಾಮನೂರು ಗ್ರಾಮದ ಕಿರಣ ಕರಬಡಗಿ(30) ಮೃತಪಟ್ಟ ಯುವಕನಾಗಿದ್ದು, ಮಹೇಶ ಹುಳ್ಳಿ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮನೂರಿನಿಂದ ಹೊಸಪೇಟೆ ಸಮೀಪದ ಕಾರ್ಖಾನೆಗೆ ಕೆಲಸಕ್ಕೆ ಇಬ್ಬರು ಯುವಕರು ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಳೆಯಿಂದ ರಸ್ತೆ ಮೇಲೆ ಬಿದ್ದಿದ್ದ ಮರ ಕಾಣದೇ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮೃತ ಕಿರಣನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!