September 21, 2026

ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

0
image_editor_output_image-1386206039-1779879431153.jpg

ಬೆಂಗಳೂರು: ಸಿದ್ದರಾಮಯ್ಯ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವುದು ಅಧಿಕೃತವಾಗಿದ್ದರೂ ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಳೆ ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.

 

‘ರಾಜ್ಯಪಾಲರನ್ನು ಭೇಟಿಯಾಗಲು ನಾಳೆ ಸಮಯ ಕೇಳಿದ್ದಾರೆ’ ಎಂದು ಮುಖ್ಯಮಂತ್ರಿಯ ಆಪ್ತ ಮೂಲವೊಂದು ಪಿಟಿಐಗೆ ತಿಳಿಸಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಗೆಹಲೋತ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

You may have missed

error: Content is protected !!