May 27, 2026

ಶಿವಮೊಗ್ಗ: ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

0
image_editor_output_image747939566-1779884026917.jpg

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕರ್ತವ್ಯನಿರತರಾಗಿದ್ದ ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬುಧವಾರ ನಡೆದಿದೆ.

ಬೆಳಗಾವಿ ಮೂಲದ ಈರಣ್ಣ ಗುಡಾದಾರ್ (26) ಮೃತಪಟ್ಟ ದುರದೃಷ್ಟಕರ ಕಾನ್ಸ್‌ಟೇಬಲ್ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾದ ಈರಣ್ಣ ಗುಡಾದಾರ್ ಅವರು ಕಳೆದ 7 ವರ್ಷಗಳಿಂದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಬುಧವಾರ ಅವರು ಎಂದಿನಂತೆ ತಮ್ಮ ಕರ್ತವ್ಯದಲ್ಲಿದ್ದಾಗ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.
ಈರಣ್ಣ ಅವರು ಕುಸಿದು ಬೀಳುತ್ತಿದ್ದಂತೆ ತಕ್ಷಣವೇ ಎಚ್ಚೆತ್ತ ಅವರ ಸಹೋದ್ಯೋಗಿಗಳು ಹಾಗೂ ಸ್ನೇಹಿತರು ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯದಲ್ಲೇ ಈರಣ್ಣ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ಅತ್ಯಂತ ಅದ್ದೂರಿಯಾಗಿ ವಿವಾಹ ನೆರವೇರಿತ್ತು. ಮದುವೆಯ ಸಂಭ್ರಮ ಮುಗಿಸಿ ಇತ್ತೀಚೆಗಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು.

Leave a Reply

Your email address will not be published. Required fields are marked *

error: Content is protected !!