May 28, 2026

ಸಜಿಪಮೂಡ: ಅಕ್ರಮ ಜಾನುವಾರು ವಧೆ ಅಡ್ಡೆಗೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

0
image_editor_output_image-1135880500-1779982275030

ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧೆ ಅಡ್ಡೆಯೊಂದಕ್ಕೆ ಬಂಟ್ವಾಳ ನಗರ ಪೊಲೀಸರು ಬುಧವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಧೆಗಾಗಿ ಕಟ್ಟಿ ಹಾಕಲಾಗಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂದು ಗುರುತಿಸಲಾಗಿದೆ.

ಮೇ 27ರ ಬುಧವಾರ ತಡರಾತ್ರಿ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಮತ್ತು ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಆರೋಪಿಗಳು ಜಾನುವಾರೊಂದನ್ನು ವಧೆ ಮಾಡಿ ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿದೆ. ಇನ್ನೂ ಹೆಚ್ಚಿನ ಸಂಖ್ಯೆಯ ದನಗಳನ್ನು ವಧೆ ಮಾಡುವ ಉದ್ದೇಶದಿಂದ ಅಲ್ಲಿ ಕಟ್ಟಿಹಾಕಲಾಗಿತ್ತು.

Leave a Reply

Your email address will not be published. Required fields are marked *

error: Content is protected !!