September 21, 2026

ಮುಲ್ಕಿ: ದ್ವಿಚಕ್ರ ವಾಹನ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

0
image_editor_output_image-2090151335-1780033512494.jpg

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕುಖ್ಯಾತ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಕಳುವಾಗಿದ್ದ ಬೈಕ್ ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುರತ್ಕಲ್‌ನ ಮುಕ್ಕ ನಿವಾಸಿ ಮೊಹಮ್ಮದ್ ರಾಝಿಕ್ (36) ಮತ್ತು ಬೈಕಂಪಾಡಿಯ ಅಂಗರಗುಂಡಿ ನಿವಾಸಿ ಉಬೈದತ್ ಹೈದರ್ (31) ಬಂಧಿತ ಆರೋಪಿಗಳಾಗಿದ್ದಾರೆ.

 

ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ಕ್ರೈಂ ಇನ್ವೆಸ್ಟಿಗೇಷನ್ ತಂಡ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದೆ.

ಮೇ 18 ರಂದು ಮುಲ್ಕಿ ಜಂಕ್ಷನ್ ಬಳಿಯ ಅಪೋಲೊ ಫಾರ್ಮಾ ಹತ್ತಿರ ನಿಲ್ಲಿಸಲಾಗಿದ್ದ ಹೋಂಡಾ ಯುನಿಕಾರ್ನ್ (KA 20 EB 6383) ಬೈಕ್ ಅನ್ನು ಯಾರೋ ಖದೀಮರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ತನಿಖೆ ಕೈಗೆತ್ತಿಕೊಂಡ ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿಂದ ಸುಮಾರು 20,000/- ರೂ. ಮೌಲ್ಯದ ಕಳುವಾಗಿದ್ದ ಹೋಂಡಾ ಯುನಿಕಾರ್ನ್ ಬೈಕ್ ಮತ್ತು ಸುಮಾರು 18,000/- ರೂ. ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಸದ್ಯ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!