July 14, 2026

ಬೆಳ್ತಂಗಡಿ: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ: ಇಬ್ಬರು ಆರೋಪಿಗಳು ಅರೆಸ್ಟ್

0
image_editor_output_image-643408892-1780034303143.jpg

ಬೆಳ್ತಂಗಡಿ: ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ ಮಾದಕವಸ್ತುವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ತನ್ವೀರ್ (27) ಹಾಗೂ ಮೂಡಬಿದಿರೆಯ ಕಲ್ಲಬೆಟ್ಟು ನಿವಾಸಿ ಮುಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ. ಪ್ರಕರಣದ ಮೂರನೇ ಆರೋಪಿ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಹಂಝತ್ ಕರಾರ್ ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ.

ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಮೇ 27 ರಂದು ಮಾದಕವಸ್ತು ಸಾಗಾಟದ ಕುರಿತು ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಹಾಗೂ ಸಿಬ್ಬಂದಿ ತಂಡ, ಗುರುವಾಯನಕೆರೆ–ಮೂಡಬಿದಿರೆ ರಸ್ತೆಯ ಕಂಬಳದಡ್ಡ ಎಂಬಲ್ಲಿ ನಾಖಾಬಂದಿ (ರಸ್ತೆ ತಡೆ) ಹಾಕಿ ವಾಹನ ತಪಾಸಣೆ ಆರಂಭಿಸಿದರು.

ಈ ವೇಳೆ ಅನುಮಾನಾಸ್ಪದವಾಗಿ ಬಂದ ಕಾರನ್ನು ತಡೆದು ತೀವ್ರ ಪರಿಶೀಲನೆ ನಡೆಸಿದಾಗ, ಮಾರಾಟಕ್ಕಾಗಿ ಅಕ್ರಮವಾಗಿ ಸಾಗಿಸುತ್ತಿದ್ದ 4 ಗ್ರಾಂ ತೂಕದ ನಿಷೇಧಿತ MDMA ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ ₹40,000 ಎಂದು ಪೊಲೀಸರು ಅಂದಾಜಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!