May 30, 2026

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ ಮೆರೆದ ಬ್ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ

0
image_editor_output_image529197839-1780133238624.jpg

ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ.

ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ. ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್‌ ಮುನೀರ್‌ ಅಹಮದ್‌ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್‌ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ.

ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುನೀರ್‌ ಅಹಮದ್‌ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!