May 31, 2026

ಪಂಚಾಯತ್ ರಾಜ್ ಉಳಿವಿಗಾಗಿ ಬಂಟ್ವಾಳದಲ್ಲಿ ನಡೆದ ಪ್ರತಿಭಟನೆ ಯಶಸ್ವಿ: ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ – ಕುಳಾಲು ಸುಭಾಶ್ಚಂದ್ರ ಶೆಟ್ಟಿ

0
IMG-20260531-WA0080

ಬಂಟ್ವಾಳ, ಮೇ 31: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ. ವತಿಯಿಂದ ಪಾಣೆಮಂಗಳೂರು ಬ್ಲಾಕ್ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಹಕಾರದೊಂದಿಗೆ, ಹಿರಿಯ ನಾಯಕರೂ ಮಾಜಿ ಸಚಿವರಾದ ಶ್ರೀ ಬಿ. ರಮನಾಥ ರೈ ಹಾಗೂ ಜಿಲ್ಲಾದ್ಯಕ್ಷರಾದ ಹರೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.

ಪಂಚಾಯತ್ ರಾಜ್ ಸಂಸ್ಥೆಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮಗಳು ಹಾಗೂ ವಿವಿಧ ವೈಫಲ್ಯಗಳನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಮುಖ ವಾಗ್ಮಿಯಾಗಿ ಸುದೀರ್ ಕುಮಾರ್ ಮರೋಳಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗಳಿಗೆ 2025-26ನೇ ಸಾಲಿನ ಹಣಕಾಸು ಯೋಜನೆಯ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಬೇಕು, ವಿಜಿ ರಾಮ್ ಜಿ ಯೋಜನೆಯನ್ನು ರದ್ದುಗೊಳಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು, ವಿಧಾನಸಭೆ ಹಾಗೂ ಲೋಕಸಭೆಗಳಲ್ಲಿ ಮಹಿಳೆಯರಿಗೆ 35% ಮೀಸಲಾತಿ ಕಾನೂನನ್ನು ತಕ್ಷಣ ಜಾರಿಗೊಳಿಸಬೇಕು, ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಸಿಇಟಿ ಮಾದರಿಯಲ್ಲಿಯೇ ಉನ್ನತ ಶಿಕ್ಷಣ ಪ್ರವೇಶಕ್ಕೆ ರಾಜ್ಯಗಳಿಗೆ ಅಧಿಕಾರ ನೀಡಬೇಕು ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಇಳಿಸಿ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಯಿತು.

ಪ್ರತಿಭಟನೆಯ ಯಶಸ್ಸಿಗೆ ಸಹಕರಿಸಿದ ನಿಗಮ ಮಂಡಳಿಯ ಅದ್ಯಕ್ಷರುಗಳಿಗೆ,ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾ ಪದಾಧಿಕಾರಿಗಳು, ಪಂಚಾಯತ್ ರಾಜ್ ಬ್ಲಾಕ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ,ಪತ್ರಿಕಾ ಮಾದ್ಯಮದ ಮಿತ್ರರಿಗೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಅವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

ಪಕ್ಷದ ಸಂಘಟನಾ ಶಕ್ತಿ ಹಾಗೂ ಕಾರ್ಯಕರ್ತರ ಏಕತೆ ಈ ಪ್ರತಿಭಟನೆಯ ಯಶಸ್ಸಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿಯೂ ಜನಪರ ಹೋರಾಟಗಳು ಇನ್ನಷ್ಟು ಬಲಿಷ್ಠವಾಗಿ ಮುಂದುವರಿಯಲಿವೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!