ಡೆತ್‌ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆ
ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ.
ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ, ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಿನ್ನೆ (ಮೇ 30) ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.





