June 1, 2026

ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಆಯ್ಕೆಯಾಗಿದ್ದ ಅಥ್ಲೀಟ್ ಚಿರಾಗ್ ಗುಂಡಿಕ್ಕಿ ಹತ್ಯೆ

0
image_editor_output_image1479858785-1780300220993.jpg

ಘಾಜಿಯಾಬಾದ್: ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಆಯ್ಕೆಯಾಗಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ (25) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದೆ.

ಚಿರಾಗ್ ತ್ಯಾಗಿ ದೇಶದ ಭರವಸೆಯ ಪ್ಯಾರಾ ಅಥ್ಲೀಟ್‌ಗಳಲ್ಲಿ ಒಬ್ಬರಾಗಿದ್ದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್ಗೆ ಅವರು ಅರ್ಹತೆ ಪಡೆದಿದ್ದರು.

ಬುಧವಾರ ಬೆಳಗ್ಗೆ ಚಿರಾಗ್ ತಮ್ಮ ಕುಟುಂಬದವರಿಗೆ ಕರೆ ಮಾಡಿ ಮಧ್ಯಾಹ್ನ 3:30ರೊಳಗೆ ಮನೆಗೆ ಬರುವುದಾಗಿ ತಿಳಿಸಿದ್ದರು. ಆದರೆ ಆ ಬಳಿಕ ಅವರ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ಕುಟುಂಬದವರು ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದರು.

ತನಿಖೆ ಆರಂಭಿಸಿದ ಪೊಲೀಸರು ಶನಿವಾರ ಘಾಜಿಯಾಬಾದ್‌ನ ಸಾಯಿ ಕುಂಜ್ ಪ್ರದೇಶದಲ್ಲಿ ಚಿರಾಗ್ ಅವರ ಮೃತದೇಹ ಪತ್ತೆಹಚ್ಚಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!