ಮನೆಯಿಂದ ಚಿನ್ನಾಭರಣ ಕಳ್ಳತನ: ಚಿನ್ನಾಭರಣ ಸಹಿತ ಆರೋಪಿಗಳ ಬಂಧನ
ಹೆಬ್ರಿ: ಹೆಬ್ರಿ ತಾಲೂಕು ಅನಂತನಗರ ಕೀರ್ತನ ಪ್ರಭು ಎಂಬವರ ಮನೆಯಿಂದ ಕಳ್ಳತನ ನಡೆದ ಒಂದು ವಾರದೊಳಗೆ ಹೆಬ್ರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಚಿನ್ನಾಭರಣ ಸಹಿತ ಕಳ್ಳರನ್ನು ಬಂಧಿಸಿದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಒಟ್ಟು ಸುಮಾರು ರೂಪಾಯಿ 59,77,000/- ಮೌಲ್ಯದ ಸ್ವತ್ತುಗಳನ್ನು ಕಳವು ಆಗಿದ್ದು ಪ್ರಕರಣದ ಪತ್ತೆ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರ ಆದೇಶದಂತೆ ಉಡುಪಿ ಜಿಲ್ಲಾ ಪೊಲೀಸ್ ಹೆಚ್ಚುವರಿ ಪೊಲೀಸ್ ಅಧಿಕಾರಿ ಸುಧಾಕರ ಎಸ್ ನಾಯಕ್ ಅವರ ನಿರ್ದೇಶನದಂತೆ ಕಾರ್ಕಳ ಉಪ ವಿಭಾಗದ ಡಿವೈಎಸ್ಪಿ ಎಸ್ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಮಂಜಪ್ಪ ಡಿ ಆರ್ ಮತ್ತು ಕಾರ್ಕಳ ವೃತ್ತ ಪ್ರಭಾರ ಸಿಪಿಐ ರಾಘವೇಂದ್ರ ಅವರು ಹೆಬ್ರಿ ಪೊಲೀಸ್ ಠಾಣಾ ಪಿಎಸ್ಐ ರವರಾದ ರವಿ ಬಿ ಕೆ ಮತ್ತು ಚಂದ್ರ ಏ ಕೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಪ್ರಸನ್ನ ಎಂ ಎಸ್, ಶಿರ್ವ ಪೊಲೀಸ್ ಠಾಣಾ ಪಿಎಸ್ಐ ಮಂಜುನಾಥ ಮರಬದ, ಪಡುಬಿದ್ರಿ ಪೊಲೀಸ್ ಠಾಣಾ ಎಎಸ್ಐ ರಾಜೇಶ್ ಪಿ ರವರನ್ನು ಒಳಗೊಂಡ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ತಮಿಳುನಾಡು ಚೆನ್ನೈ ಪೆರೂರು ಮೂಲದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚರ್ಕಳ ಮುಟ್ಟತ್ತೋಡಿ ಚೆರಿಯಾಲಂಬಾಡಿ ವಾಸಿ ಕಾಸರಗೋಡು ರಮ್ದೀನ್ ಸಲೀಂ, ಮೂಡಬಿದ್ರೆಯ ಮಿಜಾರು ಗ್ರಾಮದ ಹರೀಶ್ ಮತ್ತು ಕಾಸರಗೋಡು ಜಿಲ್ಲೆಯ ನೆಕ್ರಜೆ ಗ್ರಾಮದ ನೆಲ್ಲಿಕಟ್ಟೆ ಚೆನ್ನಡ್ಕ ನಿವಾಸಿ ಮಹಮ್ಮದ್ ಸಫ್ವಾನ್ ಎಂಬವರನ್ನು ಬಂಧಿಸಿ ಕಳವಾದ 37,87,800/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ಬೆಳ್ಳಿ ಆಭರಣಗಳನ್ನು ಹಾಗೂ 4 ಲಕ್ಷ ರೂಪಾಯಿ ಮೌಲ್ಯದ ಮಾರುತಿ ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಓರ್ವ ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ.
ಪ್ರಕರಣದಲ್ಲಿ ಆರೋಪಿ ದಸ್ತಗಿರಿ ಮತ್ತು ಸ್ವತ್ತು ಸ್ವಾದಿನತಾ ಕಾರ್ಯದಲ್ಲಿ ಹೆಬ್ರಿ ಪೊಲೀಸ್ ಠಾಣಾ ಹೆಚ್ ಸಿ ರಾಜಕುಮಾರ್, ಅವಿನಾಶ್, ಪಿ ಸಿ ಕಿರಣ, ಅಜೆಕಾರು ಪೊಲೀಸ್ ಠಾಣಾ ಹೆಚ್ ಸಿ ಸತೀಶ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಪಿ ಸಿ ಸಿದ್ದರಾಯಪ್ಪ, ಸಂತೋಷ ,ಕಾರ್ಕಳ ನಗರ ಠಾಣೆ ರಂಜಿತ್ ಶೆಟ್ಟಿ ಅನ್ವರ್ ಅಲಿ, ಸಂತೋಷ, ಪಡುಬಿದ್ರಿ ಠಾಣೆ ಸಂದೇಶ್, ಕೃಷ್ಣಪ್ರಸಾದ್,ಹೆಬ್ರಿ ಠಾಣೆಯ ಮಿಥುನ್ ತನಿಖಾ ಸಹಾಯಕರಾಗಿ ಹೆಬ್ರಿ ಪೊಲೀಸ್ ಠಾಣಾ ಹ ರಘು ಮೊಘವೀರ, ಸುಜಾತ ಶೆಟ್ಟಿ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿಯ ಪಿಸಿ ಶಶಿಕುಮಾರ್, ಕಾರ್ಕಳ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ ಪೂಜಾರಿ ಭಾಗವಹಿಸಿದ್ದಾರೆ.





