July 28, 2026

7 ಲಕ್ಷ ರೂ. ವರದಕ್ಷಿಣೆ ಕೊಟ್ಟರೂ ಕಾರಿಗೆ ಬೇಡಿಕೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ

0
image_editor_output_image308709690-1780388097319.jpg

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಇನ್ಸ್ಟಾ ಇನ್ಫ್ಲೂಯೆನ್ಸರ್‌ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯ ಪೋಷಕರು ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.

ಮಾನ್ಸಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ಆಕೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿಯ ಕುಟುಂಬಸ್ಥರು ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಬಳಿಕ ಆಕೆಯ ಮೃತದೇಹವನ್ನು ನೇತುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮದುವೆಯ ವೇಳೆ ಪತಿಗೆ 7 ಲಕ್ಷ ರೂ. ನಗದು ಹಾಗೂ ಗೃಹೋಪಯೋಗಿ ವಸ್ತುಗಳನ್ನು ನೀಡಲಾಗಿತ್ತು. ಆದರೂ ಆಕೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಕಾರಿಗಾಗಿ ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆಗಳು ಈಡೇರದಿದ್ದಾಗ, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ. ಪತಿಯ ಮನೆಯಲ್ಲಿ ನೀಡುತ್ತಿದ್ದ ಚಿತ್ರಹಿಂಸೆಯ ಬಗ್ಗೆ ತಮ್ಮ ಕುಟುಂಬಕ್ಕೆ ತಿಳಿಸಿದ್ದರು ಎಂದು ವರದಿಯಾಗಿದೆ.

ಮಗಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆಂದು ಪತಿಯ ಕುಟುಂಬ ಹೇಳಿಕೊಂಡಿದೆ. ಇದು ಆತ್ಮಹತ್ಯೆ ಎಂದು ಬಿಂಬಿಸಲಾದ ಕೊಲೆ ಎಂದು ಮಾನ್ಸಿ ಪೋಷಕರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!