ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಿಜೆಪಿಗೆ ರಾಜೀನಮೆ
ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.
ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.





