ಬೆಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ
ಬೆಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೆ ಕ್ಷಣಗಳಲ್ಲಿ ನಡೆಯಲಿರು ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲು ಬನ್ನಿ ಎಂದು ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿದ್ದಕ್ಕಾಗಿ, ಖಾದರ್ ಈ ರಾಜೀನಾಮೆ ನಿರ್ಧಾರ ಮಾಡಿದ್ದಾರೆನ್ನಲಾಗಿದೆ.
ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ಯು.ಟಿ. ಖಾದರ್ ಧನ್ಯವಾದ ತಿಳಿಸಿದ್ದಾರೆ. ಲೋಕಭವನಕ್ಕೆ ತೆರಳಿ ಗವರ್ನರ್ ಭೇಟಿಯಾಗಿರುವ ಅವರು, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಈ ಹಿಂದೆ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಖಾದರ್ಗೆ ಡಿಕೆಶಿ ಸರ್ಕಾರದಲ್ಲೂ ಅದೇ ಖಾತೆ ಸಿಗಬಹುದೆಂಬ ನಿರೀಕ್ಷೆ ಇದೆ.





