ಶಿವಮೊಗ್ಗ: ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಐರಾವತ ಬಸ್
ಶಿವಮೊಗ್ಗ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಮುಡುಬಾ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ.
ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಇನ್ನಷ್ಟು ಅನ್ವೇಷಿಸಿ
ರಾಷ್ಟ್ರೀಯ ಸುದ್ದಿ ಸಂಗ್ರಹ
ಬಂಟ್ವಾಳ ಸ್ಥಳೀಯ ವ್ಯವಹಾರಗಳು
ಸುಳ್ಯ ವಾಣಿಜ್ಯೋದ್ಯಮ
Tourist Destinations
Travel Guides & Travelogues
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.





