June 3, 2026

ತೆಕ್ಕಟ್ಟೆ: ಜೀಪ್, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

0
image_editor_output_image1143969005-1780488054446.jpg

ತೆಕ್ಕಟ್ಟೆ: ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರಮುಖ ಸರ್ಕಲ್‌ನಲ್ಲಿ ಜೂನ್ 2ರ ಮಂಗಳವಾರ ತಡರಾತ್ರಿ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ತೆಕ್ಕಟ್ಟೆ ಸರ್ಕಲ್ ರಸ್ತೆಯಾಗಿ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಮಂಗಳವಾರ ರಾತ್ರಿ ಸರಿ ಸುಮಾರು 9:47 ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವೇಗವಾಗಿ ಬಂದ ಜೀಪ್ ಹಾಗೂ ಬೈಕ್ ನಡುವೆ ಉಂಟಾದ ಡಿಕ್ಕಿಯ ರಭಸಕ್ಕೆ ಗಣೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ಈ ಪ್ರಮುಖ ಜಂಕ್ಷನ್ ಭಾಗದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಅಪಘಾತದ ಸಂಪೂರ್ಣ ಭೀಕರ ದೃಶ್ಯಾವಳಿಗಳು ಲೈವ್ ಆಗಿ ಸೆರೆಯಾಗಿವೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!