ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’: ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವುದು ಹೇಗೆ?: ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ ವಿದ್ಯಾರ್ಥಿ ಸಮೂಹಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’ ನೀಡುವುದಾಗಿ ಮುಖ್ಯಮಂತ್ರಿಗಳು ಮಹತ್ತರ ಘೋಷಣೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವ್ಯಾಪ್ತಿಯಲ್ಲಿ ಸದ್ಯ ಪಾಸ್ ಪಡೆಯಲು ಇರುವ ನಿಯಮಗಳು, ಪ್ರಸ್ತುತ ಇರುವ ದರ ಪಟ್ಟಿ ಹಾಗೂ ಇನ್ನು ಮುಂದೆ ಉಚಿತ ಪಾಸ್ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈಗಿರುವ ನಿಯಮಗಳ ಪ್ರಕಾರವೇ ಅರ್ಜಿ ಸಲ್ಲಿಸಬೇಕು. ಆದರೆ, ಮುಖ್ಯ ಬದಲಾವಣೆ ಎಂದರೆ ವಿದ್ಯಾರ್ಥಿಗಳು ಇನ್ನು ಮುಂದೆ ಪಾಸ್‌ಗಾಗಿ ಯಾವುದೇ ಹಣವನ್ನು ಪಾವತಿ ಮಾಡಬೇಕಿರುವುದಿಲ್ಲ.
ವಿದ್ಯಾರ್ಥಿಗಳು ಯಾವುದೇ ಸೈಬರ್ ಸೆಂಟರ್, ಬೆಂಗಳೂರು ಒನ್ ಕೇಂದ್ರಗಳು ಅಥವಾ ತಮ್ಮ ಮೊಬೈಲ್ ಮೂಲಕ ‘ಸೇವಾಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಲು ಫಾರ್ಮ್‌ಗೆ 10 ರೂ. ಹಾಗೂ ಆನ್‌ಲೈನ್ ಸಲ್ಲಿಕೆಗಾಗಿ 100 ರೂ. ಸೇವಾ ಶುಲ್ಕ ಇರಲಿದೆ.
ವಿದ್ಯಾರ್ಥಿಯ ಆಧಾರ್ ಕಾರ್ಡ್, ಪ್ರಸ್ತುತ ಸಾಲಿನ Admission Receipt ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಇರಬೇಕು.
ಆನ್‌ಲೈನ್ ಅಪ್ಲಿಕೇಶನ್ ಹಾಕಿದ ನಂತರ, ವಿದ್ಯಾರ್ಥಿಯು ತಾನು ಓದುತ್ತಿರುವ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ (ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರು) ಸಹಿ ಮತ್ತು ಸೀಲು ಹಾಕಿಸಿಕೊಳ್ಳಬೇಕು.
ಶಕ್ತಿ ಯೋಜನೆ ಅಡಿಯಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಮಹಿಳಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಇರುವುದರಿಂದ ಅವರು ಪ್ರತ್ಯೇಕವಾಗಿ ಪಾಸ್ ಪಡೆಯುವ ಅಗತ್ಯವಿಲ್ಲ. ಕೇವಲ ವಿದ್ಯಾರ್ಥಿಗಳು (ಗಂಡು ಮಕ್ಕಳು) ಮಾತ್ರ ಮುಖ್ಯಮಂತ್ರಿಗಳು ಘೋಷಿಸಿರುವ ಈ ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಬೇಕಾಗಿದೆ.





