ನಟಿ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಪತಿ, ಅತ್ತೆಗೆ ನ್ಯಾಯಾಂಗ ಬಂಧನ
ಭೋಪಾಲ್: ಮಾಡೆಲ್, ನಟಿ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ-ಅತ್ತೆ ಇಬ್ಬರೂ ಜೈಲುಪಾಲಾಗಿದ್ದು, ಜೂನ್ 16ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ವಿಶೇಷ ಸಿಬಿಐ ಕೋರ್ಟ್ ಆದೇಶಿಸಿದೆ.ವರದಕ್ಷಿಣೆ ಕಿರುಕುಳದ ಆರೋಪ ಎದುರಿಸುತ್ತಿರುವ ತ್ವಿಶಾ ಶರ್ಮಾ ಅವರ ಪತಿ ಸಮರ್ಥ್ ಸಿಂಗ್ ಮತ್ತು ಅತ್ತೆ ಗಿರಿಬಾಲಾ ಸಿಂಗ್ ಸಿಬಿಐ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಮಂಗಳವಾರ (ಜೂ.2) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


