ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ:
ಕಾಂಗ್ರೆಸ್ ಮೇಲುಗೈ
ಬೆಂಗಳೂರು: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಜೆಡಿಎಸ್ ಕೂಡ ಗಮನಾರ್ಹ ಸಾಧನೆ ಮಾಡಿದೆ.
ನಗರಸಭೆ ಚುನಾವಣಾ ಫಲಿತಾಂಶ:
ನಗರಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಒಟ್ಟು 166 ಸ್ಥಾನಗಳ ಪೈಕಿ ಕಾಂಗ್ರೆಸ್ 61 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಬಿಜೆಪಿ 67 ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ 12 ಮತ್ತು ಇತರರು 26 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
ಪುರಸಭೆ ಚುನಾವಣಾ ಫಲಿತಾಂಶ:
ಇನ್ನು ಪುರಸಭೆಯ ಒಟ್ಟು 441 ಸ್ಥಾನಗಳ ಪೈಕಿ ಕಾಂಗ್ರೆಸ್ 201 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 176 ಸ್ಥಾನಗಳಲ್ಲಿ ಜಯಗಳಿಸಿದ್ದರೆ ಜೆಡಿಎಸ್ 21 ಸ್ಥಾನ ಗಳಿಸಿದರೆ, ಇತರರು 43 ಸ್ಥಾನಗಳನ್ನು ಗಳಿಸಿಕೊಂಡಿದೆ.
ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ:
ಪಟ್ಟಣ ಪಂಚಾಯಿತಿಯ ಒಟ್ಟು 577 ಸ್ಥಾನಗಳ ಪೈಕಿ, ಕಾಂಗ್ರೆಸ್ 236 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 194 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಜೆಡಿಎಸ್ ಪಕ್ಷ 12 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡರೆ, ಇತರರು 135 ಸ್ಥಾನ ಉಳಿಸಿಕೊಂಡಿದ್ದಾರೆ.