June 5, 2026

ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ:

0
image_editor_output_image-1314591169-1780603357562.jpg

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ವಹಿಸಿ ರಾಜ್ಯ ಸರಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಚಿವ ಸಂಪುಟ ರಚನೆಯ ನಂತರ ಖಾತೆ ಹಂಚಿಕೆ ಕುರಿತಾಗಿ ತೀವ್ರ ಕುತೂಹಲ ಮೂಡಿದ್ದರೆ, ಇದೀಗ ಅದಕ್ಕೆ ತೆರೆ ಬಿದ್ದಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್-ಹಣಕಾಸು, ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಹಾಗೂ ಹಂಚಿಕೆಯಾಗದ ಎಲ್ಲ ಇಲಾಖೆಗಳ ಜವಾಬ್ದಾರಿಯನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್-ಕಂದಾಯ ಹಾಗೂ ಕ್ರೀಡಾ ಮತ್ತು ಯುವಜನ ಸಬಲೀಕರಣ ಖಾತೆಗಳನ್ನು ನೀಡಲಾಗಿದೆ.

ಸಚಿವರಾದ ಪ್ರಿಯಾಂಕ್ ಖರ್ಗೆ-ಗೃಹ, ಐಟಿ ಬಿಟಿ, ಕೆ.ಎಚ್.ಮುನಿಯಪ್ಪ-ಆಹಾರ ಮತ್ತು ನಾಗರಿಕ ಸರಬರಾಜು, ಕೆ.ಜೆ.ಜಾರ್ಜ್-ಇಂಧನ ಹಾಗೂ ಪ್ರವಾಸೋದ್ಯಮ, ಎಂ.ಬಿ.ಪಾಟೀಲ್-ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ, ರಾಮಲಿಂಗಾರೆಡ್ಡಿ-ಜಲಸಂಪನ್ಮೂಲ, ಸತೀಶ್ ಜಾರಕಿಹೊಳಿ-ಲೋಕೋಪಯೋಗಿ, ಕೃಷ್ಣ ಬೈರೇಗೌಡ-ಬೆಂಗಳೂರು ಅಭಿವೃದ್ಧಿ ಯು.ಟಿ.ಖಾದರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಈಶ್ವರ್ ಖಂಡ್ರೆ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಡಾ.ಯತೀಂದ್ರ ಸಿದ್ದರಾಮಯ್ಯ-ನಗರಾಭಿವೃದ್ಧಿ, ಬೈರತಿ ಸುರೇಶ್-ಸಾರಿಗೆ, ಡಾ.ಶರಣ ಪ್ರಕಾಶ್ ಪಾಟೀಲ್‌-ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಇಲಾಖೆಗಳನ್ನು ಹಂಚಿಕೆ ಮಾಡಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!