ವಿಟ್ಲ:ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮುಂಜಾನೆ ಭೀಕರ ಕಾರು ಅಪಾಘಾತವೊಂದು ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
