June 5, 2026

ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ತಾರತಮ್ಯ ಮಾಡಲಾಗಿದೆ: ಸಚಿವ ಕೆ.ಎಚ್. ಮುನಿಯಪ್ಪ

0
image_editor_output_image-1040075811-1780649650162.jpg

ಬೆಂಗಳೂರು: ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನದ ವ್ಯಕ್ತ ಪಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ಈ ತಾರತಮ್ಯ ಹೀಗೆಯೇ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಕಷ್ಟವಾಗಲಿದೆ” ಎಂದು ಸ್ಫೋಟಕ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿಭಾಯಿಸಿರುವ ತಮಗೆ ಮತ್ತೆ ಅದೇ ಖಾತೆ ನೀಡಿರುವುದಕ್ಕೆ ಕೆ.ಎಚ್. ಮುನಿಯಪ್ಪ ತೀವ್ರ ಬೇಸರ ಹೊರಹಾಕಿದ್ದಾರೆ. “ನಾನು ರಾಜಕೀಯದಲ್ಲಿ 8 ಬಾರಿ ಗೆದ್ದಿರುವ ಅತ್ಯಂತ ಹಿರಿಯ ನಾಯಕ. ಸಂಪುಟದಲ್ಲಿ ಪ್ರೊಟೊಕಾಲ್ ಪ್ರಕಾರ ಸೀನಿಯಾರಿಟಿ ನೋಡಿ ಖಾತೆ ಹಂಚಬೇಕಿತ್ತು. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ನೇರ ಅವಕಾಶವಿರುವ ದೊಡ್ಡ ಖಾತೆ ನೀಡುವಂತೆ ನಾನು ಮೊದಲೇ ಕೇಳಿದ್ದೆ. ಆದರೆ ಹಂಚಿಕೆಯಲ್ಲಿ ಯಾವುದೇ ಸಮಾತೋಲನ ಕಾಯ್ದುಕೊಂಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!