ಕಾಪು: ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆ: ಆರೋಪಿಯ ಅಶೋಕ್ ಬಂಧನ
ಉಡುಪಿ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ತನಿಖೆ ವೇಳೆ ಜಾನುವಾರನ್ನು ವಧೆ ಮಾಡಿ ಮಾಂಸ ತೆಗೆದು, ಅವಶೇಷಗಳನ್ನು ಹೊಳೆಗೆ ಎಸೆದ ಆರೋಪದಡಿ ಶಿರ್ವ ಪದವಿನ ನಿವಾಸಿ ಅಶೋಕ (52) ಎಂಬಾತನನ್ನು ಜೂನ್ 5ರಂದು ಬಂಧಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಜಾನುವಾರಿನ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ್ದ ಅಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ದುಷ್ಕರ್ಮಿಗಳನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಆರೋಪಿಗಳನ್ನು ಬಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದರು.





